7
ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು. ಮತ್ತು ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು. ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿಸ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು. ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”
ಸೆರೆಹಿಡಿಯಲ್ಪಟ್ಟವರಲ್ಲಿ ಹಿಂತಿರುಗಿಬಂದವರ ಪಟ್ಟಿ
ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ. ಆದ್ದರಿಂದ ನನ್ನ ದೇವರು ನಮ್ಮ ಜನರನ್ನು ಒಟ್ಟುಗೂಡಿಸುವಂತೆ ನನ್ನನ್ನು ಪ್ರೇರೇಪಿಸಿದನು. ಅಂತೆಯೇ ನಾನು ಎಲ್ಲಾ ಗಣ್ಯರನ್ನು, ಅಧಿಕಾರಿಗಳನ್ನು ಮತ್ತು ಸಾಮಾನ್ಯರನ್ನು ಒಟ್ಟಾಗಿ ಸೇರಿಬರಲು ಆಮಂತ್ರಿಸಿದೆನು. ಇವರ ಕುಟುಂಬಗಳ ಪಟ್ಟಿಯನ್ನು ನಾನು ಮಾಡಬೇಕಿತ್ತು. ಮೊಟ್ಟಮೊದಲನೆಯ ಸಾರಿ ಸೆರೆಯಿಂದ ಹಿಂತಿರುಗಿ ಬಂದ ಸಂಸಾರಗಳ ಪಟ್ಟಿಯು ನನಗೆ ದೊರೆಯಿತು. ಅದರ ವಿವರ ಹೀಗಿದೆ:
ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:
 
ಪರೋಷನ ಸಂತಾನದವರು 2,172
ಶೆಫಟ್ಯನ ಸಂತಾನದವರು 372
10 ಆರಹನ ಸಂತಾನದವರು 652
11 ಪಹತ್ ಮೋವಾಬಿನವರಾದ ಯೇಷೂವನ ಮತ್ತು ಯೋವಾಬನ ಸಂತಾನದವರು 2,818
12 ಏಲಾಮನ ಸಂತಾನದವರು 1,254
13 ಜತ್ತೂವಿನ ಸಂತಾನದವರು 845
14 ಜಕ್ಕೈನ ಸಂತಾನದವರು 760
15 ಬಿನ್ನೂಯನ ಸಂತಾನದವರು 648
16 ಬೇಬೈಯ ಸಂತಾನದವರು 628
17 ಅಜ್ಗಾದಿನ ಸಂತಾನದವರು 2,322
18 ಅದೋನಿಕಾಮನ ಸಂತಾನದವರು 667
19 ಬಿಗ್ವೈನ ಸಂತಾನದವರು 2,067
20 ಆದೀನನ ಸಂತಾನದವರು 655
21 ಹಿಜ್ಕೀಯ ಕುಟುಂಬಕ್ಕೆ ಸೇರಿದ ಆಟೇರಿನ ಸಂತಾನದವರು 98
22 ಹಾಷುಮಿನ ಸಂತಾನದವರು 328
23 ಬೇಚೈಯ ಸಂತಾನದವರು 324
24 ಹಾರಿಫನ ಸಂತಾನದವರು 112
25 ಗಿಬ್ಯೋನನ ಸಂತಾನದವರು 95
26 ಬೆತ್ಲೆಹೇಮ್ ಮತ್ತು ನೆಟೋಫ ಊರಿನವರು 188
27 ಅನಾತೋತ್ ಊರಿನವರು 128
28 ಬೇತಜ್ಮಾವೇತ್ ಪಟ್ಟಣದವರು 42
29 ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಪಟ್ಟಣದವರು 743
30 ರಾಮಾ ಮತ್ತು ಗೆಬ ಪಟ್ಟಣದವರು 621
31 ಮಿಕ್ಮಾಸಿಯ ಪಟ್ಟಣದವರು 122
32 ಬೇತೇಲ್ ಮತ್ತು ಆಯಿ ಪಟ್ಟಣದವರು 123
33 ನೆಬೋ ಎಂಬ ಇನ್ನೊಂದು ಪಟ್ಟಣದವರು 52
34 ಏಲಾಮ್ ಎಂಬ ಇನ್ನೊಂದು ಊರಿನವರು 1,254
35 ಹಾರಿಮ್ ಪಟ್ಟಣದವರು 320
36 ಜೆರಿಕೊ ಪಟ್ಟಣದವರು 345
37 ಲೋದ್, ಹಾದೀದ್ ಮತ್ತು ಓನೋ ಪಟ್ಟಣದವರು 721
38 ಸೆನಾಹ ಪಟ್ಟಣದವರು 3,930
 
39 ಯಾಜಕರಲ್ಲಿ:
ಯೆದಾಯನವರಾದ ಯೇಷೂವನ ಸಂತಾನದವರು 973
40 ಇಮ್ಮೇರನ ಸಂತಾನದವರು 1,052
41 ಪಷ್ಹೂರನ ಸಂತಾನದವರು 1,247
42 ಹಾರಿಮನ ಸಂತಾನದವರು 1,017
 
43 ಲೇವಿಕುಲದವರಲ್ಲಿ:
ಹೋದವ್ಯನವರಾದ ಯೇಷೂವನ ಮತ್ತು ಕದ್ಮೀಯೇಲನ ಸಂತಾನದವರು 74
 
44 ಗಾಯಕರಲ್ಲಿ:
ಅಸಾಫನ ಸಂತಾನದವರು 148
 
45 ದ್ವಾರಪಾಲಕರಲ್ಲಿ:
ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ ಮತ್ತು ಶೋಬೈಯ ಸಂತಾನದವರು 138
 
46 ದೇವಾಲಯದ ಸೇವಕರಲ್ಲಿ:
ಜೀಹನ ಸಂತಾನದವರು, ಹಸೂಫ, ಟಬ್ಬಾವೋತ್,
47 ಕೇರೋಸ್, ಸೀಯ, ಪಾದೋನ್,
48 ಲೆಬಾನ, ಹಗಾಬ, ಸಲ್ಮೈ,
49 ಹಾನಾನ್, ಗಿದ್ದೇಲ್, ಗಹರ್,
50 ರೆವಾಯ, ರೆಚೀನ್, ನೆಕೋದ,
51 ಗಜ್ಜಾಮ್, ಉಜ್ಜ, ಪಾಸೇಹ,
52 ಬೇಸೈ, ಮೆಯನೀಮ್, ನೆಫೀಷೆಸೀಮ್,
53 ಬಕ್ಬೂಕ್, ಹಕ್ಕೂಫ, ಹರ್ಹೂರ್,
54 ಬಚ್ಲೂತ್, ಮೆಹೀದ್, ಹರ್ಷ,
55 ಬರ್ಕೋಸ್, ಸೀಸೆರ, ತೆಮಹ,
56 ನೆಚೀಹ ಮತ್ತು ಹಟೀಫ.
 
57 ಇವರು ಸೊಲೊಮೋನನ ಸೇವಕರ ಸಂತಾನದವರು:
ಸೋಟೈ, ಸೋಫೆರೆತ್, ಪೆರೀದ,
58 ಯಾಲ, ದರ್ಕೋನ್, ಗಿದ್ದೇಲ್,
59 ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್ ಮತ್ತು ಆಮೋನ್.
60 ದೇವಾಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು 392
 
61 ತೇಲ್ಮೆಲಹ ತೇಲ್ಹರ್ಷ, ಕೆರೂಬದ್ದೋನ್ ಮತ್ತು ಇಮ್ಮೇರ್ ಪಟ್ಟಣಗಳಿಂದ ಜೆರುಸಲೇಮಿಗೆ ಕೆಲವು ಮಂದಿ ಬಂದರು. ಆದರೆ ಇವರು ನಿಜವಾಗಿಯೂ ಇಸ್ರೇಲ್ ಜನಾಂಗದವರೆಂಬದಾಗಿ ಅವರಿಗೆ ರುಜುವಾತು ಮಾಡಲಾಗಲಿಲ್ಲ.
 
62 ದೆಲಾಯ, ಟೋಬೀಯ ಮತ್ತು ನೆಕೋದನ ಸಂತಾನದವರು 642
 
63 ಯಾಜಕರಲ್ಲಿ:
ಹೋಬಾಯ, ಹಕ್ಕೋಚ್ ಮತ್ತು ಬರ್ಜಿಲ್ಲೈ (ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಗಳನ್ನು ಮದುವೆಯಾದವನು ಬರ್ಜಿಲ್ಲೈ ಎಂಬ ಹೆಸರನ್ನು ಇಟ್ಟುಕೊಂಡಿದ್ದನು.) ಸಂತಾನದವರು.
 
64 ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಾಡಿದರೂ ಸಿಗಲಿಲ್ಲ. ತಮ್ಮ ಪೂರ್ವಿಕರು ಯಾಜಕರೆಂದು ರುಜುವಾತು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯಾಜಕ ಪಟ್ಟಿಯಲ್ಲಿ ಅವರನ್ನು ಸೇರಿಸಲಿಲ್ಲ. 65 ಒಬ್ಬ ಪ್ರಧಾನ ಯಾಜಕನು ಊರೀಮ್ ತುಮ್ಮೀಮ್ ಧರಿಸಿ ದೇವರಿಂದ ಉತ್ತರವನ್ನು ಹೊಂದುವ ತನಕ ಅವರಲ್ಲಿ ಯಾರೂ ಪವಿತ್ರ ಆಹಾರದಲ್ಲಿ ಯಾವುದನ್ನೂ ತಿನ್ನಬಾರದೆಂದು ರಾಜ್ಯಪಾಲನು ಆಜ್ಞಾಪಿಸಿದನು.
 
66-67 ಹೀಗೆ ಹಿಂತಿರುಗಿ ಬಂದವರ ಒಟ್ಟು ಸಂಖ್ಯೆ 42,360. ಇವರಲ್ಲಿ 7,337 ಮಂದಿ ಅವರ ಸೇವಕಸೇವಕಿಯರಾಗಿದ್ದರು. 245 ಮಂದಿ ಗಾಯಕಗಾಯಕಿಯರು ಈ ಸಂಖ್ಯೆಯಲ್ಲಿ ಸೇರಿರಲಿಲ್ಲ. 68-69 ಅವರಲ್ಲಿ 736 ಕುದುರೆಗಳು, 245 ಹೇಸರಕತ್ತೆಗಳು, 435 ಒಂಟೆಗಳು ಮತ್ತು 6,720 ಕತ್ತೆಗಳು ಇದ್ದವು.
 
70 ಇವರ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕಾಗಿ ಹಣವನ್ನು ದಾನವಾಗಿ ಕೊಟ್ಟರು. ರಾಜ್ಯಪಾಲನು ಹತ್ತೊಂಭತ್ತು ಪೌಂಡು ಬಂಗಾರವನ್ನು. ಐವತ್ತು ಬೋಗುಣಿಗಳನ್ನು ಮತ್ತು ಐನೂರ ಮೂವತ್ತು ಯಾಜಕರ ವಸ್ತ್ರಗಳನ್ನು ಕೊಟ್ಟನು. 71 ಗೋತ್ರಪ್ರಧಾನರು ಮೂನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ ಕೊಟ್ಟರು. 72 ಒಟ್ಟು ಇತರರು ಮುನ್ನೂರ ಎಪ್ಪತ್ತೈದು ಪೌಂಡು ಬಂಗಾರ, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿ ಮತ್ತು ಅರವತ್ತೇಳು ಯಾಜಕರ ಬಟ್ಟೆಯನ್ನು ದಾನವಾಗಿ ಕೊಟ್ಟರು.
73 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.