41
ರಚನೆಗಾರ: ದಾವೀದ.
ಯಾವನು ಬಡಜನರನ್ನು* ಬಡಜನರು … ಪಡೆದುಕೊಳ್ಳುವನು ಅಥವಾ, “ಬಡಜನರಿಗೆ ಉಪದೇಶಿಸುವವನು ಧನ್ಯನೇ ಸರಿ.” ಅಭಿವೃದ್ಧಿಪಡಿಸುವನೋ ಅವನೇ ಧನ್ಯನು.
ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು.
ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು.
ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.
ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ
ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!
 
ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು.
ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.
ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ,
ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ.
ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು;
ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು.
ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು;
ನನಗೆ ಕೇಡುಮಾಡಲು ಆಲೋಚಿಸುವರು.
“ಅವನು ಯಾವುದೋ ತಪ್ಪು ಮಾಡಿರುವುದರಿಂದ
ಅವನಿಗೆ ಕಾಯಿಲೆ ಬಂದಿದೆ,
ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ.
ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು,
ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.
10 ಯೆಹೋವನೇ, ದಯವಿಟ್ಟು ನನಗೆ ದಯೆತೋರು;
ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು.
11 ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ,
ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.
12 ನಿರಪರಾಧಿಯಾದ ನನಗೆ ಸಹಾಯಮಾಡು.
ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು.
 
13 ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ!
ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು.
 
ಆಮೆನ್, ಆಮೆನ್!
 

*41:1: ಬಡಜನರು … ಪಡೆದುಕೊಳ್ಳುವನು ಅಥವಾ, “ಬಡಜನರಿಗೆ ಉಪದೇಶಿಸುವವನು ಧನ್ಯನೇ ಸರಿ.”