64
ರಚನೆಗಾರ: ದಾವೀದ.
1 ದೇವರೇ, ನನಗೆ ಕಿವಿಗೊಡು.
ವೈರಿಯು ನನಗೆ ಬೆದರಿಕೆ ಹಾಕಿದ್ದಾನೆ.
ನನ್ನ ಪ್ರಾಣವನ್ನು ರಕ್ಷಿಸು.
2 ನನ್ನ ಶತ್ರುಗಳ ಒಳಸಂಚುಗಳಿಂದ ನನ್ನನ್ನು ಸಂರಕ್ಷಿಸು.
ಆ ದುಷ್ಟರಿಗೆ ಸಿಕ್ಕದಂತೆ ನನ್ನನ್ನು ಮರೆಮಾಡು.
3 ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ.
ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
ಅವರ ಮಾತುಗಳು ವಿಷಬಾಣಗಳಂತಿವೆ.
4 ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿದ್ದು ನಿರ್ಭಯದಿಂದ* ನಿರ್ಭಯದಿಂದ ಅಥವಾ ಅಗೌರವದಿಂದ.
ನೀತಿವಂತನ ಮೇಲೆ ಆ ಬಾಣಗಳನ್ನು ಎಸೆಯುತ್ತಾರೆ.
5 ಕೇಡುಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು.
“ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
6 ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ.
ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.† ಅವರು … ಬಹು ಕಷ್ಟ ಅಥವಾ, “ಅವರು ದುಷ್ಟ ಯೋಜನೆಗಳಿಗಾಗಿ ಎದುರುನೋಡುತ್ತಾ, ನಮ್ಮಲ್ಲಿ ಸಂಪೂರ್ಣವಾದ ಯೋಜನೆಯಿದೆ” ಎನ್ನುತ್ತಾರೆ.
7 ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು.
ಆಗ ಆ ದುಷ್ಟರು ಗಾಯಗೊಳ್ಳುವರು.
8 ದುಷ್ಟರು ಬೇರೆಯವರಿಗೆ ಕೇಡುಮಾಡಲು ಆಲೋಚಿಸುವರು.
ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು.
ಆಗ ಅವರನ್ನು ಕಂಡ ಪ್ರತಿಯೊಬ್ಬನೂ
ಆಶ್ಚರ್ಯದಿಂದ ತಲೆಯಾಡಿಸುವನು.
9 ದೇವರ ಕಾರ್ಯವನ್ನು ಜನರು ಕಂಡು
ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು.
ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು
ಆತನಲ್ಲಿ ಭಯಭಕ್ತಿಯುಳ್ಳವರಾಗುವರು.
10 ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ
ಆತನನ್ನೇ ಆಶ್ರಯಿಸಿಕೊಳ್ಳುವರು.
ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.