127
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ಸೊಲೋಮೋನ.
ಯೆಹೋವನು ಮನೆಯನ್ನು ಕಟ್ಟದಿದ್ದರೆ,
ಕಟ್ಟುವವರ ಸಮಯವೆಲ್ಲಾ ವ್ಯರ್ಥ.
ಯೆಹೋವನು ಪಟ್ಟಣವನ್ನು ಕಾಯದಿದ್ದರೆ,
ಕಾವಲುಗಾರರ ಸಮಯವೆಲ್ಲಾ ವ್ಯರ್ಥ.
 
ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು
ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ.
ಯಾಕೆಂದರೆ ದೇವರು ತನ್ನ ಪ್ರಿಯರಿಗೆ
ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
 
ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.
ಯೌವನಸ್ಥನ ಗಂಡುಮಕ್ಕಳು ಸೈನಿಕನ ಬತ್ತಳಿಕೆಯಲ್ಲಿರುವ ಬಾಣಗಳಂತಿದ್ದಾರೆ.
ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ.
ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.