೨
೧ ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ
*ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ
†ಸಹಾಯಕನು ನಮಗಿದ್ದಾನೆ.
೨ ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ
‡ಸಮಸ್ತ ಲೋಕದ ಪಾಪಗಳಿಗೂ
§ಪ್ರಾಯಶ್ಚಿತ್ತವಾಗಿದ್ದಾನೆ.
ಕ್ರಿಸ್ತನ ಆಜ್ಞೆಗಳಂತೆ ನಡೆಯುವವರೆ ಆತನನ್ನರಿತವರು
೩ *ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.
೪ ಒಬ್ಬನು, ನಾನು
†ಆತನನ್ನು ಬಲ್ಲೆನು ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
೫ ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ
‡ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ.
§ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
೬ *ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು
†ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.
ಕತ್ತಲೆಯನ್ನು ಬಿಟ್ಟು ಬೆಳಕಿಗೆ ಸೇರುವವರಲ್ಲಿ ಪ್ರೀತಿಸ್ವಭಾ ಅತ್ಯವಶ್ಯ
೭ ಪ್ರಿಯರೇ,
‡ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ,
§ಮೊದಲಿನಿಂದಲೂ ನಿಮಗಿದ್ದ
*ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
೮ †ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೆ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ
‡ಕತ್ತಲೆಯು ಕಳೆದುಹೋಗುತ್ತದೆ.
§ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
೯ ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು
*ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
೧೦ ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ
†ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
೧೧ ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು
‡ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.
ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ
೧೨ ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ
§ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
೧೩ ತಂದೆಯಂದರೇ,
*ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು
†ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ,
‡ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
೧೪ ತಂದೆಯಂದರೇ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು
§ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
ದೇವರನ್ನು ಪ್ರೀತಿಸುವವರು ಲೋಕವನ್ನು ಪ್ರೀತಿಸಬಾರದು
೧೫ *ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ.
†ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
೧೬ ಲೋಕದಲ್ಲಿರುವ
‡ಶರೀರದಾಶೆ,
§ಕಣ್ಣಿನಾಶೆ,
*ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
೧೭ †ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
ಕ್ರಿಸ್ತವಿರೋಧಿಗಳಾದ ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ
೧೮ ಪ್ರಿಯ ಮಕ್ಕಳೇ,
‡ಇದು ಅಂತ್ಯ ಕಾಲವಾಗಿದೆ.
§ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ.
*ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ.
†ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
೧೯ ‡ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ.
§ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ
*ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
೨೦ ಆದರೆ ನೀವು ಪವಿತ್ರನಾಗಿರುವಾತನಿಂದ
†ಅಭಿಷೇಕವನ್ನು ಹೊಂದಿದವರಾಗಿದ್ದೀರಿ
‡ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
೨೧ ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.
೨೨ ಸುಳ್ಳುಗಾರನು ಯಾರು?
§ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತ್ಯಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು
*ಕ್ರಿಸ್ತವಿರೋಧಿಯಾಗಿದ್ದಾನೆ.
೨೩ †ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.
೨೪ ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ
‡ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ
§ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
೨೫ ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ
*ನಿತ್ಯಜೀವವೇ ಆಗಿದೆ.
೨೬ †ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.
೨೭ ಆದರೆ
‡ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ
§ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ
*ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
೨೮ ಪ್ರಿಯ ಮಕ್ಕಳೇ,
†ಆತನು ಪ್ರತ್ಯಕ್ಷನಾಗುವಾಗ ನಾವು
‡ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ
§ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
೨೯ *ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು
†ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.