2 John
2 ಯೋಹಾನನು
ಪೀಠಿಕೆ
೧  * 3 ಯೋಹಾ. 1:ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ. ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ; ೨ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು 3 ಯೋಹಾ. 1; 1 ಯೋಹಾ 3:18:ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, § ಯೋಹಾ. 1:17; 14:6:ಸತ್ಯವನ್ನು * ಯೋಹಾ 8:32; 1 ತಿಮೊ. 2:4:ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. ೩  1 ತಿಮೊ. 1:2; ಯೂದ 2:ತಂದೆಯಾದ ದೇವರಿಂದಲೂ, ದೇವರ ಮಗನಾಗಿರುವ ಯೇಸು ಕ್ರಿಸ್ತನಿಂದಲೂ, ಕೃಪೆಯೂ, ಕರುಣೆಯೂ, ಶಾಂತಿಯೂ, ಸತ್ಯವೂ, ಪ್ರೀತಿಯೂ ಸದಾಕಾಲ ನಮ್ಮೊಂದಿಗಿರಲಿ.
ದುರ್ಬೋಧಕರ ವಿಷಯದಲ್ಲಿ ಎಚ್ಚರಿಕೆ
೪ ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು 3 ಯೋಹಾ 3,4:ಬಹಳ ಸಂತೋಷಪಟ್ಟೆನು. ೫ ಅಮ್ಮನವರೇ, § 1 ಯೋಹಾ 2:7:ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು * 1 ಯೋಹಾ 2:8; 3:11:ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. ೬  1 ಯೋಹಾ 5:3:ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, 1 ಯೋಹಾ 2:24:ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ. ೭ ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ § ಮೂಲ:ಬರುವ. 1 ಯೋಹಾ 2:22; 4:2,3:ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ * 1 ಯೋಹಾ 2:18,26; 4:1:ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ. ೮  ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ. ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಗಲಾ. 3:4; ಇಬ್ರಿ. 10:35:ಕಳೆದುಕೊಳ್ಳದೆ § 1 ಕೊರಿ. 3:8:ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. ೯ ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ* 1 ಯೋಹಾ 2:23:. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೂನ್ಯತೆ ಇರುತ್ತದೆ. ೧೦ ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10:ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ೧೧ ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
ಕೊನೆಯಮಾತುಗಳು
೧೨  3 ಯೋಹಾ. 13:ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, § 3 ಯೋಹಾ. 14:ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. * ಯೋಹಾ. 15:11; 17:13; 1 ಯೋಹಾ. 1:4:ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು. ೧೩ ದೇವರು ಆರಿಸಿಕೊಂಡವರಾದ, ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ಹೇಳುತ್ತಾರೆ.

*೧:೧ 3 ಯೋಹಾ. 1:

೧:೧ ಕೆಲವರು ಸಭೆಗೆ ಎಂದು ಅರ್ಥಮಾಡಿಕೊಳ್ಳುತ್ತಾರೆ.

೧:೨ 3 ಯೋಹಾ. 1; 1 ಯೋಹಾ 3:18:

§೧:೨ ಯೋಹಾ. 1:17; 14:6:

*೧:೨ ಯೋಹಾ 8:32; 1 ತಿಮೊ. 2:4:

೧:೩ 1 ತಿಮೊ. 1:2; ಯೂದ 2:

೧:೪ 3 ಯೋಹಾ 3,4:

§೧:೫ 1 ಯೋಹಾ 2:7:

*೧:೫ 1 ಯೋಹಾ 2:8; 3:11:

೧:೬ 1 ಯೋಹಾ 5:3:

೧:೬ 1 ಯೋಹಾ 2:24:

§೧:೭ ಮೂಲ:ಬರುವ. 1 ಯೋಹಾ 2:22; 4:2,3:

*೧:೭ 1 ಯೋಹಾ 2:18,26; 4:1:

೧:೮ ಕೆಲವು ಪ್ರತಿಗಳಲ್ಲಿ, ನೀವು ಎಂದು ಬರೆದದೆ.

೧:೮ ಗಲಾ. 3:4; ಇಬ್ರಿ. 10:35:

§೧:೮ 1 ಕೊರಿ. 3:8:

*೧:೯ 1 ಯೋಹಾ 2:23:

೧:೧೦ ರೋಮಾ. 16:17; ಗಲಾ. 1:8,9; 2 ಥೆಸ. 3:6,14; ತೀತ. 3:10:

೧:೧೨ 3 ಯೋಹಾ. 13:

§೧:೧೨ 3 ಯೋಹಾ. 14:

*೧:೧೨ ಯೋಹಾ. 15:11; 17:13; 1 ಯೋಹಾ. 1:4: