೭
ಕ್ರಿಸ್ತನಲ್ಲಿ ಐಕ್ಯವಾದವರು ಧರ್ಮಶಾಸ್ತ್ರದ ಆಧಿನರಲ್ಲ
೧ ಪ್ರಿಯರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ? ೨ ಇದಕ್ಕೆ ದೃಷ್ಟಾಂತ, * 1 ಕೊರಿ. 7:39ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ. ೩ ಹೀಗಿರಲಾಗಿ ಗಂಡನು ಜೀವದಿಂದಿರುವಾಗ † ಮತ್ತಾಯನು 5:32ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ. ೪ ಹಾಗೆಯೇ ನನ್ನ ಸಹೋದರರೇ, ನೀವು ಸಹ ‡ ಎಫೆ. 2:16, ಕೊಲೊ. 1:22ಕ್ರಿಸ್ತನ ದೇಹದ ಮೂಲಕವಾಗಿ § ರೋಮಾ. 8:2, ಗಲಾ. 2:19, ಎಫೆ. 2:15, ಕೊಲೊ. 2:14ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. * ರೋಮಾ. 6:22, ಗಲಾ. 5:22, ಎಫೆ. 5:9ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ. ೫ ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ † ರೋಮಾ. 6:21-23ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು. ೬ ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ‡ ರೋಮಾ. 6:4ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
ಪಾಪದಿಂದ ಬಿಡಿಸಲು ಧರ್ಮಶಾಸ್ತ್ರಕ್ಕೆ ಶಕ್ತಿ ಸಾಲದು.
೭ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. § ರೋಮಾ. 3:20ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ * ರೋಮಾ. 13:9, ವಿಮೋ. 20:17, ಧರ್ಮೋ. 5:21ದುರಾಶೆ ಪಾಪವೆಂದು ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ. ೮ ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. † 1 ಕೊರಿ. 15:56ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ. ೯ ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು. ೧೦ ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು. ೧೧ ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು. ೧೨ ಹೀಗಿರಲಾಗಿ ‡ ಕೀರ್ತ. 19:8-9, 119:137, 2 ಪೇತ್ರ. 2:21ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ. ೧೩ ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
೧೪ ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ § 1 ಅರಸು. 21:20,25; 2 ಅರಸು. 17:17, ಯೆಶಾ. 50:1, 52:3ಮಾರಲ್ಪಟ್ಟವನೂ ಆಗಿದ್ದೇನೆ. ೧೫ ಹೇಗಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, * ರೋಮಾ. 7:18-19ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುಧ್ಧವಾದದ್ದನ್ನು ಮಾಡುತ್ತೇನೆ. ೧೬ ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ † 1 ತಿಮೊ. 1:8, ರೋಮಾ. 7:12ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು. ೧೭ ಹೀಗಿರಲಾಗಿ ‡ ರೋಮಾ. 7:20ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ. ೧೮ § ಆದಿ. 6:5, 8:21, ಕೀರ್ತ. 51:5, ಯೆರೆಮೀಯನು 17:9ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು. ೧೯ * ರೋಮಾ. 7:15, ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ. ೨೦ ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ † ರೋಮಾ. 7:17ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ೨೧ ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ. ೨೨ ಅಂತರಾತ್ಮದೊಳಗೆ ‡ ಕೀರ್ತ. 1:2, 112:1, 119:35ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. § ಗಲಾ. 5:17ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ. ೨೩ ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ. ೨೪ ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! * ರೋಮಾ. 8:23ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು? ೨೫ † 1 ಕೊರಿ. 15:57ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.
§೭:೪ ರೋಮಾ. 8:2, ಗಲಾ. 2:19, ಎಫೆ. 2:15, ಕೊಲೊ. 2:14
*೭:೪ ರೋಮಾ. 6:22, ಗಲಾ. 5:22, ಎಫೆ. 5:9
†೭:೫ ರೋಮಾ. 6:21-23
‡೭:೬ ರೋಮಾ. 6:4
§೭:೭ ರೋಮಾ. 3:20
*೭:೭ ರೋಮಾ. 13:9, ವಿಮೋ. 20:17, ಧರ್ಮೋ. 5:21
‡೭:೧೨ ಕೀರ್ತ. 19:8-9, 119:137, 2 ಪೇತ್ರ. 2:21
§೭:೧೪ 1 ಅರಸು. 21:20,25; 2 ಅರಸು. 17:17, ಯೆಶಾ. 50:1, 52:3
*೭:೧೫ ರೋಮಾ. 7:18-19
†೭:೧೬ 1 ತಿಮೊ. 1:8, ರೋಮಾ. 7:12
‡೭:೧೭ ರೋಮಾ. 7:20
§೭:೧೮ ಆದಿ. 6:5, 8:21, ಕೀರ್ತ. 51:5, ಯೆರೆಮೀಯನು 17:9
*೭:೧೯ ರೋಮಾ. 7:15,
†೭:೨೦ ರೋಮಾ. 7:17
‡೭:೨೨ ಕೀರ್ತ. 1:2, 112:1, 119:35
§೭:೨೨ ಗಲಾ. 5:17
*೭:೨೪ ರೋಮಾ. 8:23